alex Certify ಟೀಮ್ ಇಂಡಿಯಾ ಟಿ20 ತಂಡಕ್ಕೆ ಧೋನಿ ಬಲ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಮ್ ಇಂಡಿಯಾ ಟಿ20 ತಂಡಕ್ಕೆ ಧೋನಿ ಬಲ ?

ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಫೈನಲ್ ಗೇರಲು ವಿಫಲವಾಗಿತ್ತು. ಅಲ್ಲದೆ ಕೆಲ ಆಟಗಾರರ ಕಳಪೆ ಪ್ರದರ್ಶನವೂ ಕ್ರಿಕೆಟ್ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಹೀಗಾಗಿ ಬಿಸಿಸಿಐ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಭಾರತದ ಟಿ 20 ತಂಡಕ್ಕೆ ಐಸಿಸಿ ಟೂರ್ನಿಗಳಲ್ಲಿ ಭಾರತ ಕಂಡ ಶ್ರೇಷ್ಠ ನಾಯಕ ಎಂಬ ಹೆಗ್ಗಳಿಕೆ ಹೊಂದಿರುವ ಮಹೇಂದ್ರ ಸಿಂಗ್ ಧೋನಿ ಅವರನ್ನು ನಿರ್ದೇಶಕರನ್ನಾಗಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಈ ರೀತಿ ನೇಮಕವಾದರೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮೇಲಿನ ಹೊರೆಯೂ ತಗ್ಗಲಿದೆ ಎಂಬ ಲೆಕ್ಕಾಚಾರದಲ್ಲಿರುವ ಬಿಸಿಸಿಐ, ಮಹೇಂದ್ರ ಸಿಂಗ್ ಧೋನಿ ಅವರನ್ನು ನಿರ್ದೇಶಕರನ್ನಾಗಿಸಿದರೆ 2024ರ ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡ ಕಟ್ಟಬಹುದು ಎಂಬ ಚಿಂತನೆ ಹೊಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...