alex Certify ಟೀಸರ್ ಬಿಡುಗಡೆ ಬೆನ್ನಲ್ಲೇ ‘ಆದಿಪುರುಷ್’ ವಿವಾದ ಶುರು; ಚಿತ್ರ ನಿಷೇಧಿಸುವಂತೆ ಅಯೋಧ್ಯೆ ರಾಮ ಮಂದಿರ ಮುಖ್ಯ ಅರ್ಚಕರ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಸರ್ ಬಿಡುಗಡೆ ಬೆನ್ನಲ್ಲೇ ‘ಆದಿಪುರುಷ್’ ವಿವಾದ ಶುರು; ಚಿತ್ರ ನಿಷೇಧಿಸುವಂತೆ ಅಯೋಧ್ಯೆ ರಾಮ ಮಂದಿರ ಮುಖ್ಯ ಅರ್ಚಕರ ಆಗ್ರಹ

ನಟ ಪ್ರಭಾಸ್ ಅಭಿನಯದ ‘ಆದಿಪುರುಷ್’ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದು, ಇದರ ಬೆನ್ನಿಗೆ ವಿವಾದ ಶುರುವಾಗಿದೆ. ಈ ಚಿತ್ರದಲ್ಲಿ ಭಗವಾನ್ ಶ್ರೀರಾಮ, ಹನುಮಂತನನ್ನು ಮಹಾಕಾವ್ಯದಲ್ಲಿ ವಿವರಿಸಿರುವಂತೆ ತೋರಿಸಲಾಗಿಲ್ಲ. ಅಲ್ಲದೆ ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ಚಿತ್ರವನ್ನು ನಿಷೇಧಿಸುವಂತೆ ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.

ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ಶ್ರೀ ರಾಮನಾಗಿ ಕಾಣಿಸಿಕೊಂಡರೆ, ಕೃತಿ ಸನೂನ್ ಸೀತಾಮಾತೆಯಾಗಿ ಅಭಿನಯಿಸಿದ್ದಾರೆ. ಲಕ್ಷ್ಮಣನಾಗಿ ಸನ್ನಿ ಸಿಂಗ್ ನಟಿಸಿದ್ದು, ಈ ಚಿತ್ರ ಮುಂದಿನ ವರ್ಷದ ಜನವರಿ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ಅಲ್ಲದೆ ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಬಿಡುಗಡೆಯಾದಾಗ ಸೈಫ್ ಅಲಿ ಖಾನ್ ಅವರ ಲುಕ್ ಕುರಿತೂ ಪ್ರೇಕ್ಷಕರಿಂದ ಟೀಕೆ ಕೇಳಿ ಬಂದಿತ್ತು.

ಇದರ ಮಧ್ಯೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಕೂಡ ಚಿತ್ರದ ಟೀಸರ್ ಕುರಿತು ತಮ್ಮ ಅಸಮಾಧಾನ ಹೊರಹಾಕಿದ್ದು, ಉದ್ದೇಶಪೂರ್ವಕವಾಗಿಯೇ ಇಂತಹ ಸಂಘರ್ಷವನ್ನು ಹುಟ್ಟು ಹಾಕಲಾಗುತ್ತಿದೆ. ಸಿನಿಮಾ ಮಾಡುವುದು ತಪ್ಪಲ್ಲ. ಆದರೆ ಎಲ್ಲರ ಗಮನ ಸೆಳೆಯಬೇಕು ಎಂಬ ಕಾರಣಕ್ಕಾಗಿ ಉದ್ದೇಶಪೂರ್ವಕವಾಗಿಯೇ ಇಂತಹ ವಿವಾದಗಳನ್ನು ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಬಾಲಿವುಡ್ ನಲ್ಲಿ ಒಂದು ಬಿಗ್ ಹಿಟ್ ಗಾಗಿ ಕಾಯುತ್ತಿರುವ ಪ್ರಭಾಸ್ ಅವರ ಈ ಚಿತ್ರ ಈಗ ವಿವಾದಕ್ಕೆ ಕಾರಣವಾಗಿರುವುದು ಕುತೂಹಲ ಸೃಷ್ಟಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...