ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾದೊಂದಿಗೆ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೆ, ಬಹುತೇಕ ಕೊರೊನಾ ಪ್ರಕರಣಗಳ ಟೆಸ್ಟ್ ಓಮಿಕ್ರಾನ್ ಎಂದು ಬರುತ್ತಿದೆ.
ಅಲ್ಲಿ ಕಳೆದೆರಡು ದಿನಗಳಲ್ಲಿ ಪರೀಕ್ಷೆ ನಡೆಸಿದ್ದ ಕೊರೊನಾ ಸೋಂಕಿತರ ಮಾದರಿಗಳಲ್ಲಿ ಶೇ. 84ರಷ್ಟು ಪ್ರಕರಣಗಳು ಓಮಿಕ್ರಾನ್ ಪ್ರಕರಣಗಳಾಗಿ ಕಂಡು ಬರುತ್ತಿವೆ.
ಈ ಕುರಿತು ಆರೋಗ್ಯ ಸಚಿವರು ಹೇಳಿದ್ದು, ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ. ಡಿ. 30 ಹಾಗೂ 31ರಂದು ನಡೆಸಿದ್ದ ಕೊರೊನಾ ಸೋಂಕಿತರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಒಳಪಡಿಸಲಾಗಿದ್ದು, ಅವುಗಳಲ್ಲಿ ಶೇ. 84ರಷ್ಟು ಪ್ರಕರಣಗಳು ಓಮಿಕ್ರಾನ್ ಎಂದು ಬಂದಿವೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಭಾನುವಾರ ಬರೋಬ್ಬರಿ 3,194 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣುತ್ತಿದೆ.
ಇದರೊಂದಿಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಅಲ್ಲಿ ಏರಿಕೆ ಕಾಣುತ್ತಿದೆ. ದೆಹಲಿ ಅಷ್ಟೆ ಅಲ್ಲದೇ, ದೇಶದ ವಿವಿಧ ರಾಜ್ಯಗಳಲ್ಲಿ ಕೂಡ ಓಮಿಕ್ರಾನ್ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ ಹಾಗೂ ಕರ್ನಾಟಕ ಸೇರಿದಂತ ಹಲವು ರಾಜ್ಯಗಳಲ್ಲಿ ಓಮಿಕ್ರಾನ್ ನ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ.