ಮುಸ್ಲಿಂ ಮೂಲಭೂತವಾದಿಗಳಿಂದ ಮಂಗಳವಾರದಂದು ಹತ್ಯೆಯಾದ ರಾಜಸ್ಥಾನ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಅವರ ಅಂತ್ಯಕ್ರಿಯೆ ಇಂದು ಭಾರಿ ಜನಸ್ತೋಮದ ನಡುವೆ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿ, ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
ಕನ್ನಯ್ಯ ಲಾಲ್ ಅಂತ್ಯ ಸಂಸ್ಕಾರದ ಮೆರವಣಿಗೆಯುದ್ದಕ್ಕೂ ಜೈ ಶ್ರೀರಾಮ್, ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಿದ್ದ ಜನಸ್ತೋಮ, ಆಡಳಿತರೂಢ ರಾಜಸ್ಥಾನ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂತ್ಯಸಂಸ್ಕಾರದ ವೇಳೆ ಕನ್ನಯ್ಯ ಲಾಲ್ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಇದು ನೆರೆದವರ ಕಣ್ಣಂಚನ್ನು ತೇವಗೊಳಿಸಿತ್ತು. ಬಳಿಕ ಮಾತನಾಡಿದ ಕನ್ನಯ್ಯ ಲಾಲ್ ಕುಟುಂಬಸ್ಥರು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.