alex Certify ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು; 9 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು; 9 ಜನರಿಗೆ ಗಾಯ

ವಿಜಯಪುರ: ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಇಂಡಿ ತಾಲೂಕಿನ ಧೂಳಖೇಡ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.

ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದು, 9 ಜನ ಗಾಯಗೊಂಡಿದ್ದಾರೆ. ಭಯ್ಯಾಜಿ ಶಿಂಧೆ(50), ಸುಮಿತ್ರಾ ಶಿಂಧೆ(45) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ನಿವಾಸಿಗಳಾಗಿದ್ದು, ಕಬ್ಬು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಗೆ ಮಹಾರಾಷ್ಟ್ರದ ಅಕ್ಕಲಕೋಟೆಗೆ ತೆರಳುತ್ತಿದ್ದ ಕ್ರೂಸರ್ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ 9 ಜನ ಗಾಯಗೊಂಡಿದ್ದು, ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಮೂಲದ ಇವರೆಲ್ಲ ಮಹಾರಾಷ್ಟ್ರದ ಅಕ್ಕಲಕೋಟ ಸಮೀಪದ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಝಳಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...