alex Certify ಡಿನೋಟೀಫಿಕೇಷನ್ ಪ್ರಕರಣ; ಮಾಜಿ ಸಿಎಂ ಯಡಿಯೂರಪ್ಪಗೆ ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿನೋಟೀಫಿಕೇಷನ್ ಪ್ರಕರಣ; ಮಾಜಿ ಸಿಎಂ ಯಡಿಯೂರಪ್ಪಗೆ ಜಾಮೀನು ಮಂಜೂರು

ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

2000-2001ರಲ್ಲಿ ಐಟಿ ಪಾರ್ಕ್ ಗೆಂದು ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿದ್ದ ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿನ 4.30 ಎಕರೆ ಭೂಮಿಯನ್ನು ಬಿ.ಎಸ್.ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ ಎಂದು ವಾಸುದೇವ ರೆಡ್ಡಿ ಎನ್ನುವವರು ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿನ್ನೆ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಯಡಿಯೂರಪ್ಪ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಆಕ್ಷೇಪಣೆಗಳಿದ್ದರೆ ಅರ್ಜಿ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚಿಸಿತ್ತು. ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಇದೀಗ ವಿಚಾರಣೆ ನಡೆಸಿರುವ ಕೋರ್ಟ್ ಯಡಿಯೂರಪ್ಪನವರಿಗೆ ಜಾಮೀನು ಮಂಜೂರು ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...