alex Certify ಡಿಸಿ ಕಚೇರಿ ಮುಂದೆ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿ ಕಚೇರಿ ಮುಂದೆ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಯುವಕ

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಎದುರು ಯುವಕನೊಬ್ಬ ತನ್ನ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ತುಂಗಾ ಏತನೀರಾವರಿ ಯೋಜನೆ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಡಾ.ಅಂಬೇಡ್ಕರ್ ಕಾಲೋನಿ ನಿವಾಸಿಗಳ ಹಲವು ಮನೆಗಳನ್ನು ತೆರವುಗೊಳಿಸಲಾಗಿತ್ತು. ತಮಗೆ ನ್ಯಾಯ ಒದಗಿಸಿಕೊಡಬೇಕು ಎಂದು ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಿದ್ದರು. ಪರಿಹಾರ ಒದಗಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಈವರೆಗೂ ಯಾವುದೇ ನ್ಯಾಯ ಪರಿಹಾರ ಸಿಕ್ಕಿರಲಿಲ್ಲ ಎನ್ನಲಾಗಿದೆ.

ಇದೇ ವಿಚಾರವಾಗಿ ಇಂದು ಅಂಬೇಡ್ಕರ್ ನಗರದ ನಿವಾಸಿ ರಾಜು ಎಂಬ 29 ವರ್ಷದ ಯುವಕ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ತಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾನೆ. ಪ್ರತಿಭಟನೆಗೆ ಅಧಿಕಾರಿಗಳು ಕಿವಿಗೊಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವಕ ತನ್ನ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ. ಬೈಕ್ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದಿದೆ.

ಸ್ಥಳಕ್ಕೆ ಆಗಮಿಸಿದ ಜಯನಗರ ಠಾಣೆ ಪೊಲೀಸರು ಯುವಕ ರಾಜುನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...