
ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಬಹುನಿರೀಕ್ಷಿತ ‘ಶುಗರ್ ಫ್ಯಾಕ್ಟರಿ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದ್ದು. ಮುಕ್ತಾಯದ ಹಂತಕ್ಕೆ ತಲುಪಿದೆ.
ಚಿತ್ರತಂಡ ಇದೀಗ ಸಿನಿಪ್ರೇಕ್ಷಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಡಿಸೆಂಬರ್ ತಿಂಗಳಲ್ಲಿ ‘ಶುಗರ್ ಫ್ಯಾಕ್ಟರಿ’ ಸಿನಿಮಾವನ್ನು ರಾಜ್ಯದ್ಯಂತ ಬಿಡುಗಡೆ ಮಾಡುವುದಾಗಿ ಇಂದು ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.
ರೋಮ್ಯಾಂಟಿಕ್ ಎಂಟರ್ಟೇನರ್ ಆಧಾರಿತ ಈ ಚಿತ್ರವನ್ನು ಬಾಲಮಣಿ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಗಿರೀಶ್ ನಿರ್ಮಾಣ ಮಾಡಿದ್ದು. ಈ ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ, ಸೋನಾಲ್ ಮೊಂತೆರೋ, ಹಾಗೂ ಶಿಲ್ಪ ಶೆಟ್ಟಿ ಸೇರಿದಂತೆ ಮೂವರು ನಾಯಕಿಯರು ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ.
