
ವಿಜಯ್ ಕುಮಾರ್ ಕೊಂಡ ನಿರ್ದೇಶನದ ನಿಖಿಲ್ ಕುಮಾರಸ್ವಾಮಿ ನಟನೆಯ ಬಹುನಿರೀಕ್ಷೆಯ ‘ರೈಡರ್’ ಚಿತ್ರದ ಟ್ರೈಲರ್ ಡಿಸೆಂಬರ್ 16ರಂದು ಸಂಜೆ 6:54ಕ್ಕೆ ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.
ಇದನ್ನು ನಿಖಿಲ್ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಶಿವನಂದಿ ಎಂಟರ್ಟೈನ್ಮೆಂಟ್ ಹಾಡನ್ನು ಲಹರಿ ಮ್ಯೂಸಿಕ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಡಿಸೆಂಬರ್ 24ರಂದು ಕನ್ನಡ ಹಾಗೂ ತೆಲುಗಿನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.
ಮಗಳ ಸಾವು; ಸೆಲ್ಫಿ ವಿಡಿಯೋ ಮಾಡಿ ಅಳಿಯನ ಮನೆ ಮುಂದೆ ಆತ್ಮಹತ್ಯೆಗೆ ಶರಣಾದ ತಂದೆ
ಈ ಚಿತ್ರದಲ್ಲಿ ಅನುಷಾ ರೈ ಹಾಗೂ ಕಾಶ್ಮೀರಿ ಪರ್ದೇಸಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಡಿಸೆಂಬರ್ 19ರಂದು ಈ ಸಿನಿಮಾ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆಯಲಿದೆ. ಚಂದ್ರು ಮನೋಹರನ್ ಹಾಗೂ ಸುನಿಲ್ ಗೌಡ ನಿರ್ಮಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ.
