
ಟಾಲಿವುಡ್ ನಿರ್ದೇಶಕ ವಿಜಯ್ ಕುಮಾರ್ ಕೊಂಡ ಆಕ್ಷನ್, ಕಟ್ ಹೇಳಿರುವ ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರವನ್ನು ಇದೇ ತಿಂಗಳು ಡಿಸೆಂಬರ್ 24ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಈ ವಿಷಯ ತಿಳಿಯುತ್ತಿದ್ದಂತೆ ನಿಖಿಲ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಮೊದಲ ದಿನದ ಗಳಿಕೆಯಲ್ಲೇ ಶ್ರೀಮುರಳಿ ‘ಮದಗಜ’ ದಾಖಲೆ
ಚಂದ್ರು ಮನೋಹರನ್ ನಿರ್ಮಾಣದ ಈ ಚಿತ್ರದಲ್ಲಿ ಕಾಶ್ಮೀರ ಪರದೇಸಿ ನಾಯಕಿಯಾಗಿ ಅಭಿನಯಿಸಿದ್ದು, ‘ಕೆಜಿಎಫ್’ ರಾಮಚಂದ್ರ ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್. ಪೇಟೆ, ದತ್ತಣ್ಣ ಹಾಗೂ ಚಿಕ್ಕಣ್ಣ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ.
