alex Certify ಡಿಸೆಂಬರ್ 31ಕ್ಕೆ ತೆರೆಮೇಲೆ ಬರಲಿದೆ ಅರ್ಜುನ್ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸೆಂಬರ್ 31ಕ್ಕೆ ತೆರೆಮೇಲೆ ಬರಲಿದೆ ಅರ್ಜುನ್ ಗೌಡ

ಶಂಕರ್ ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷೆಯ ‘ಅರ್ಜುನ್ ಗೌಡ’ ಚಿತ್ರ ಡಿಸೆಂಬರ್ 31ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಕೊರೊನಾದಿಂದ ಇಹಲೋಕ ತ್ಯಜಿಸಿದ ಮಾಲಶ್ರೀ ಪತಿ ಕೋಟಿ ರಾಮು ನಿರ್ಮಾಣದ ಕೊನೆಯ ಸಿನಿಮಾ ಇದಾಗಿದ್ದು, ರಿಲೀಸ್ ಮಾಡಿರುವ ಪೋಸ್ಟರ್ ನಲ್ಲಿ ನಿರ್ಮಾಪಕ ರಾಮು ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಅಪ್ಪು ನಗು ಮುಖ ನೋಡಿದಾಕ್ಷಣ ಕಣ್ಣೀರು ಬರುತ್ತೆ: ಶಿವಣ್ಣ ಭಾವುಕ

ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ನಟಿಸಿದ್ದು, ಧರ್ಮ ವಿಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದಿನೇಶ್ ಮಂಗಳೂರು, ರೇಖಾ ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆಹಂಚಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...