ಬೆಂಗಳೂರು: ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ ತಾರಕಕ್ಕೇರಿದ್ದು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮನೆಗೆ ಬೆಂಕಿಹಾಕಿ ಕೆಡವಿದವರ ಪರ ಡಿ.ಕೆ.ಶಿವಕುಮಾರ್ ನಿಂತಿದ್ದಾರೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಹಲವು ಬಾರಿ ಮನವಿ ಮಾಡಿದರೂ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ನಾಯಕರಿಗೆ ಬುದ್ಧಿಭ್ರಮಣೆ; ಸಿದ್ದರಾಮಯ್ಯ ಕನಸು ಕಾಣ್ತಿದ್ದಾರೆ; ಸಚಿವ ಶ್ರೀರಾಮುಲು ವಾಗ್ದಾಳಿ
ಓರ್ವ ಶಾಸಕನಾಗಿ ನಾವಿಂದು ಬೀದಿಯಲ್ಲಿರುವಂತಾಗಿದೆ. ನನ್ನ ಮನೆಗೆ ಬೆಂಕಿ ಹಾಕುವ ಸಂಚು ರೂಪಿಸಿದವರ ಪರ ಡಿಕೆಶಿ ನಿಂತಿದ್ದಾರೆ. ಡಿ.ಕೆ.ಶಿವಕುಮಾರ್ ನಡೆ ಬಗ್ಗೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೂ ಪತ್ರ ಬರೆಯುತ್ತೇನೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಗಮನಕ್ಕೂ ತರುತ್ತೇನೆ. ಸುರ್ಜೇವಾಲ ನನಗೆ ನ್ಯಾಯ ಕೊಡಿಸಲಿ ಎಂದು ಹೇಳಿದರು.
ಕೊರೊನಾ ಲಸಿಕೆ ಹಾಕಿಸಿಕೊಂಡ ವಿಮಾನ ಪ್ರಯಾಣಿಕರಿಗೆ ಖುಷಿ ಸುದ್ದಿ
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ರಾಜ್ಯದ ಸಿಎಂ ಆಗಬೇಕು. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಮಾತ್ರ 150 ಸೀಟ್ ಗೆಲ್ಲಲು ಸಾಧ್ಯ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರು ಅಷ್ಟೇ. ಜನ ಬೆಂಬಲ ಇರುವುದು ಸಿದ್ದರಾಮಯ್ಯನವರಿಗೆ. ಕಾಂಗ್ರೆಸ್ ನಾಯಕರ ಬೆಂಬಲ ಇರುವುದೂ ಕೂಡ ಸಿದ್ದರಾಮಯ್ಯನವರಿಗೆ ಮಾತ್ರ ಎಂದು ಹೇಳಿದರು.