ಬೆಂಗಳೂರು : ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕು ಬೆಳ್ಳುಬ್ಬಿ ಗ್ರಾಮದಲ್ಲಿ ನಡೆದಿದೆ.
ಡೆತ್ ನೋಟ್ ಬರೆದಿಟ್ಟು ಕಾಣೆಯಾಗಿದ್ದ ಶಿಕ್ಷಕ ಬಾಳಪ್ಪ ದಳವಾಯಿ ಕೃಷ್ಣಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲ್ಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಾಳಪ್ಪ ದಳವಾಯಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬಾಳಪ್ಪ ದಳವಾಯಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಶಿಕ್ಷಕ ವೃಂದಕ್ಕೆ, ಸ್ನೇಹಿತರಿಗೆ ಕೋಟಿ ವಂದನೆಗಳು. ನನಗೆ ಬರುವ ಸೌಲಭ್ಯಗಳನ್ನು ಒದಗಿಸಿಕೊಡಿ ಪತ್ನಿ ಮಕ್ಕಳಿಗೆ ಅನುಕೂಲವಾಗಲಿ ಎಂದು ಬರೆದಿದ್ದಾರೆ.