ಬೆಂಗಳೂರು : ಸ್ನೇಹಿತನ ಮನೆಗೆ ನುಗ್ಗಿದ್ದ ಪಾಪಿಗಳು ಕುತ್ತಿಗೆ ಸೀಳಿ ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ.
ಈ ಘಟನೆ ಹಲಸೂರಿನಲ್ಲಿ ನಡೆದಿದ್ದು, ಮಿನ್ಯೂಸ್(18) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ಆರೋಪಿಗಳು ಡ್ರಗ್ಸ್ ನ ಅಮಲಿನಲ್ಲಿದ್ದರು ಎಂದು ತಿಳಿದು ಬಂದಿದೆ.
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡ ಪಾಪಿಗಳು
ನಿನ್ನೆ ಸಂಜೆ ಕೊಲೆಯಾಗಿರುವ ಮಿನ್ಯೂಸ್ ಹಾಗೂ ಆತನ ಸ್ನೇಹಿತ ಸಂತೋಷ್ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದೆ.
ಇದರಿಂದ ಕೋಪಗೊಂಡ ಸಂತೋಷ್ ಆತನ ಸ್ನೇಹಿತರೊಂದಿಗೆ ಮಿನ್ಯೂಸ್ ಮನೆಗೆ ನುಗ್ಗಿದ್ದಾನೆ. ಆಗ ಮತ್ತೆ ಮಾತಿನ ಚಕಮಕಿ ನಡೆದಿದೆ, ಜಗಳದಲ್ಲಿ ಆರೋಪಿಗಳು ಮಿನ್ಯೂಸ್ ಕುತ್ತಿಗೆಗೆ ಬ್ಲೇಡ್ ನಿಂದ ಚುಚ್ಚಿ ಪರಾರಿಯಾಗಿದ್ದಾರೆ.
ಕೂಡಲೇ ಮಿನ್ಯೂಸ್ ನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸದ್ಯ ಪೊಲೀಸರು ಸಂತೋಷ್ ನನ್ನು ಬಂಧಿಸಿ ಇನ್ನುಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.