alex Certify ತಂದೆಗಂತೂ ಭದ್ರತೆ ಕೊಡಲಿಲ್ಲ, ನಮಗಾದರೂ ಕೊಡಿ: ಕನ್ಹಯ್ಯ ಪುತ್ರನ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಗಂತೂ ಭದ್ರತೆ ಕೊಡಲಿಲ್ಲ, ನಮಗಾದರೂ ಕೊಡಿ: ಕನ್ಹಯ್ಯ ಪುತ್ರನ ಮನವಿ

ನನ್ನ ತಂದೆಗೆ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ಕೊಟ್ಟಿರಲಿಲ್ಲ. ಈಗ ನಮಗಾದರೂ ನೀಡಿ ಎಂದು ದುರುಳರಿಂದ ಭೀಕರವಾಗಿ ಹತ್ಯೆಯಾಗಿರುವ ಟೇಲರ್ ಕನ್ಹಯ್ಯಾ ಲಾಲ್ ಅವರ ಪುತ್ರ ಯಶ್ ಮನವಿ ಮಾಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಯಶ್, ನಮ್ಮ ತಂದೆಗೆ ಪ್ರಾಣ ಬೆದರಿಕೆ ಇರುವುದರಿಂದ ಪೊಲೀಸ್ ಭದ್ರತೆ ನೀಡಬೇಕೆಂದು ಹಲವು ಬಾರಿ ಮನವಿ ಮಾಡಿದ್ದೆವು. ಆದರೆ, ಇದಕ್ಕೆ ಯಾರೂ ಕಿವಿಗೊಟ್ಟಿರಲಿಲ್ಲ. ಈಗಲಾದರೂ ನಮ್ಮ ಕುಟುಂಬಕ್ಕೆ ಭದ್ರತೆ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೇವೆ. ಅವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಹಂತಕರನ್ನು ಸುಮ್ಮನೇ ಬಿಡಬಾರದು. ಅವರಿಗೆ ಗಲ್ಲು ಶಿಕ್ಷೆಗಿಂತ ಕಡಿಮೆ ಪ್ರಮಾಣದ ಶಿಕ್ಷೆಯನ್ನಂತೂ ನೀಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಶೋಕ್ ಗೆಹ್ಲೋಟ್, ರಾಷ್ಟ್ರೀಯ ತನಿಖಾ ದಳವು ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಕ್ಷಿಪ್ರವಾಗಿ ಆರೋಪಿಗಳಿಗೆ ಶಿಕ್ಷೆ ಕೊಡಬೇಕು. ಆದಷ್ಟೂ ಬೇಗ ಚಾರ್ಜ್ ಶೀಟ್ ದಾಖಲಿಸಬೇಕು. ನಮ್ಮ ರಾಜ್ಯದಲ್ಲಿ ನಡೆದಿರುವ ಈ ಘಟನೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಆರೋಪಿಗಳನ್ನು ನಮ್ಮ ವಿಶೇಷ ಕಾರ್ಯಾಚರಣೆ ತಂಡದ ಪೊಲೀಸರು ಬಂಧಿಸಿದ್ದಾರೆ. ಅಪರಾಧಿಗಳಿಗೆ ಆದಷ್ಟೂ ಬೇಗ ಶಿಕ್ಷೆಯಾಗಲಿದೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...