alex Certify ತಡೆಗೋಡೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡೆಗೋಡೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇದರ ಮಧ್ಯೆ ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ ದೃಶ್ಯ ಸೆರೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮಂಜೇಶ್ವರ – ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಈ ಘಟನೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅತಿ ವೇಗವಾಗಿ ಬಂದಿರುವ ಈ ಕಾರು ತಿರುವು ಪಡೆದುಕೊಳ್ಳದೆ ನೇರವಾಗಿ ಗೌರಿ ಹೊಳೆಗೆ ಬಿದ್ದಿದೆ.

ಘಟನೆಯ ಸಿಸಿ ಟಿವಿ ದೃಶ್ಯವನ್ನು ವೀಕ್ಷಿಸಿದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದು ಕಾರು ಪತ್ತೆಯಾಗಿಲ್ಲ. ಕಾರಿನಲ್ಲಿ ಎಷ್ಟು ಜನರಿದ್ದರು. ಅವರಿಗೆ ಏನಾದರೂ ಅಪಾಯ ಸಂಭವಿಸಿದೆಯೋ ಎಂಬುದರ ಕುರಿತು ಈವರೆಗೂ ಯಾವುದೇ ಮಾಹಿತಿ ದೊರೆತಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...