ತನ್ನದೇ ರೈಫಲ್ ನಿಂದ ಮಿಸ್ ಫೈರ್ ಆಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
ತಮಿಳುನಾಡಿನ ಗುಡಲೂರು ಗ್ರಾಮದ ಭಾರತೀಯ ಸೇನೆಯ ಯೋಧ ಈಶ್ವರನ್ ಆರ್ (27) ಮಂಗಳವಾರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮಂಕೋಟೆ ಸೆಕ್ಟರ್‌ನಲ್ಲಿ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ಸಾವನ್ನಪ್ಪಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಯೋಧನನ್ನು ಪ್ರಸ್ತುತ 37 ರಾಷ್ಟ್ರೀಯ ರೈಫಲ್ಸ್ (RR) ನಲ್ಲಿ ನಿಯೋಜಿಸಲಾಗಿತ್ತು. ಅವರ ಸರ್ವೀಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದೆ. ಬುಲೆಟ್ ಏಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಈಶ್ವರನ್ ಅವರನ್ನು ಮೆಂಧಾರ್‌ನಲ್ಲಿರುವ ಉಪ-ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಸಾವನ್ನಪ್ಪಿರೋದಾಗಿ ವೈದ್ಯರು ಘೋಷಿಸಿದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಅವರ ದೇಹವನ್ನು ಸೇನೆಗೆ ಹಸ್ತಾಂತರಿಸಲಾಯಿತು.