ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಯುವತಿಗೆ ಕಾಮುಕನೊಬ್ಬ ಕಿರುಕುಳ ನೀಡಿದ್ದು, ಯುವತಿ ಆತನಿಗೆ ತಕ್ಕ ಪಾಠ ಕಲಿಸಿದ್ದಾಳೆ.
ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದ್ದು, ಸಾರ್ವಜನಿಕರ ಸಮ್ಮುಖದಲ್ಲೇ ಕಾಮುಕನಿಗೆ ರಬ್ಬರ್ ಪೈಪಿನಿಂದ ಯುವತಿ ಥಳಿಸುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವತಿಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಆತನಿಗೆ ಪಾಠ ಕಲಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಆಂಧ್ರ ಪ್ರದೇಶ ಮಹಿಳಾ ಆಯೋಗದ ಅಧ್ಯಕ್ಷೆ ವಸೀರೆಡ್ಡಿ ಪದ್ಮಾ ಕೂಡಾ ಯುವತಿಗೆ ಶ್ಲಾಘನೆ ಮಾಡಿದ್ದು, ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ವಿಡಿಯೋ ಹಂಚಿಕೊಂಡಿದ್ದಾರೆ.