ಬೆಂಗಳೂರು: ಭ್ರಷ್ಟಾಚಾರ ತಡೆಯಲೆಂದೇ ಲೋಕಾಯುಕ್ತ ಸ್ಥಾಪಿಸಲಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿಯೇ ಲೋಕಾಯುಕ್ತ ರಚನೆ ಮಾಡಲಾಗಿದೆ. ಪೊಲೀಸರು ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ ಎಂದರು.
ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್ ಗಳು ಮುಚ್ಚಿ ಹೋಗಿದ್ದವು. ಕಾಂಗ್ರೆಸ್ ಶಾಸಕರ ಮೇಲೂ ಹಲವು ಆರೋಪಗಳಿದ್ದವು. ಅವೆಲ್ಲವನ್ನೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಚ್ಚಿ ಹಾಕಲಾಗಿತ್ತು. ಈ ಎಲ್ಲಾ ಕೇಸ್ ಗಳ ತನಿಖೆ ಆಗಲಿ. ಲೋಕಾಯುಕ್ತ ಸರ್ವಸ್ವತಂತ್ರವಾಗಿ ತನಿಖೆ ನಡೆಸಲಿ ಎಂದು ಸಿಎಂ ಹೇಳಿದರು.