ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿರುವ ಸಂಗತಿ ಎಲ್ಲರಿಗೂ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ಧೋನಿಯವರಿಗೆ ತಮಿಳುನಾಡಿನಲ್ಲಿ ಅಭಿಮಾನಿಗಳು ಹೆಚ್ಚಾಗಿದ್ದಾರೆ.
ಹಾಗೆಯೇ ಎಂ.ಎಸ್. ಧೋನಿ ಕೂಡ ತಮಿಳುನಾಡು ಹಾಗೂ ಅಲ್ಲಿನ ಜನತೆ ಕುರಿತು ವಿಶೇಷ ಅಭಿಮಾನ ಹೊಂದಿದ್ದಾರೆ. ಸದ್ಯ ಕ್ರಿಕೆಟ್ ನಿಂದ ದೂರ ಉಳಿದಿರುವ ಮಹೇಂದ್ರ ಸಿಂಗ್ ಧೋನಿ, 2019ರಲ್ಲಿ ಧೋನಿ ಎಂಟರ್ಟೈನ್ಮೆಂಟ್ ಸಂಸ್ಥೆಯನ್ನು ಸ್ಥಾಪಿಸಿದ್ದು, ಪ್ರಸ್ತುತ ಮುಖ್ಯ ವಾಹಿನಿಯ ಭಾಷೆಗಳಲ್ಲಿ ಮನರಂಜನ ಕಾರ್ಯಕ್ರಮಗಳನ್ನು ನಿರ್ಮಿಸುತ್ತಿದೆ.
ಇದೀಗ ಈ ಸಂಸ್ಥೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ತಮಿಳು ಭಾಷೆಯಲ್ಲಿ ಮೊದಲ ಚಿತ್ರ ಮೂಡಿಬರಲಿದೆ ಎಂದು ಹೇಳಲಾಗಿದೆ. ಈಗಾಗಲೇ ಇದಕ್ಕಾಗಿ ನಿರ್ದೇಶಕರನ್ನು ಗುರುತಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇತರೆ ಭಾಷೆಗಳಲ್ಲೂ ಸಿನಿಮಾ ನಿರ್ಮಿಸುವ ಕುರಿತು ಚಿಂತನೆ ನಡೆದಿದೆ.