
ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಪರಿಣಾಮವಾಗಿ ತಮಿಳುನಾಡಿನಲ್ಲಿ ಈ ಘಟನೆ ನಡೆದಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪ್ರತಿಷ್ಠಿತ ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ವಿಡಿಯೋದಲ್ಲಿ, ಮಧುರೈನ ಬಿಜೆಪಿಯ ಮತಗಟ್ಟೆ ಸಮಿತಿಯ ಸದಸ್ಯ ಮಹಿಳೆಯೊಬ್ಬರು ಹಿಜಾಬ್ ಧರಿಸಿ ಮತಗಟ್ಟೆ ಪ್ರವೇಶಿಸಿದ್ದನ್ನು ತೀವ್ರವಾಗಿ ಖಂಡಿಸಿರುವುದನ್ನು ಕಾಣಬಹುದಾಗಿದೆ.
ಬಿಜೆಪಿ ಸದಸ್ಯನು ಕೂಡಲೇ ಹಿಜಾಬ್ ಕಳಚುವಂತೆ ಮುಸ್ಲಿಂ ಮಹಿಳೆಗೆ ತಾಕೀತು ಮಾಡಿದ್ದಾರೆ. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು, ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷದ ಸದಸ್ಯರು ಮಹಿಳೆಗೆ ಮತ ಚಲಾಯಿಸಲು ಅವಕಾಶ ಮಾಡಿಕೊಟ್ಟರು. ಬಳಿಕ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಿಜೆಪಿ ಸದಸ್ಯನಿಗೆ ಮತಗಟ್ಟೆಯಿಂದ ಹೊರನಡೆಯುವಂತೆ ತಾಕೀತು ಮಾಡಿದರು.