ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆ; 46 ಜನರಿಗೆ ಗಾಯ 14-01-2022 7:40PM IST / No Comments / Posted In: India, Featured News, Live News ನೆರೆಯ ತಮಿಳುನಾಡಿನಲ್ಲಿ ಹೆಚ್ಚು ಖ್ಯಾತಿ ಹೊಂದಿರುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 46 ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲಿಯ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಈ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 300ಕ್ಕೂ ಅಧಿಕ ಗೂಳಿಗಳು ಆಗಮಿಸಿದ್ದವು. ಈ ಗೂಳಿಗಳನ್ನು ಪಳಗಿಸಲು ನೂರಾರು ಸಂಖ್ಯೆಯಲ್ಲಿ ಯುವಕರು ಕೂಡ ಬಂದಿದ್ದರು. ಈ ಸಂದರ್ಭದಲ್ಲಿ 46 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಸ್ಪರ್ಧೆಯು ತಮಿಳುನಾಡಿನಲ್ಲಿ ಸಾಂಪ್ರದಾಯಿಕ ಸ್ಪರ್ಧೆಯಾಗಿದೆ. ಪ್ರತಿ ವರ್ಷದ ಸಂಕ್ರಮಣದ ದಿನದಂದು ಈ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿರುತ್ತದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಭಾಗವಹಿಸಿರುತ್ತಾರೆ. ಪ್ರತಿ ವರ್ಷದಂತೆ ಈ ವರ್ಷವೂ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಯುವಕರು ಗೂಳಿಗಳನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರು. ಈ ಸಂದರ್ಭದಲ್ಲಿಯೇ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗೂಳಿಯ ಗೂನನ್ನು ಹೆಚ್ಚು ಹೊತ್ತು ಹಿಡಿದವರಿಗೆ ಬಹುಮಾನ ನೀಡಲಾಗುತ್ತದೆ. #WATCH Jallikattu competition in Avaniyapuram area of Madurai, Tamil Nadu As many as 48 persons have sustained injuries in this event, as per a health official pic.twitter.com/ZqFRCC3GKd — ANI (@ANI) January 14, 2022