alex Certify ತಾಯಿ, ಮಗಳು ನೇಣಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿ, ಮಗಳು ನೇಣಿಗೆ ಶರಣು

ಹೊಸೂರು : ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ತಮಿಳುನಾಡಿನ ಹೊಸೂರಿನ ಅಣ್ಣಾನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ಮನೆಯಿಂದ ಹೊರಗೆ ಹೋಗುತ್ತಿದ್ದಂತೆ ತಾಯಿ ಹಾಗೂ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೂರ್ಜಾನ್(38), ಮೊಸಿಂಜಾನ್(17) ಆತ್ಮಹತ್ಯೆ ಮಾಡಿಕೊಂಡವರು.

ಪತಿ ಮೆಹಬೂಬ್ ಪಾಷ ಮೆಕ್ಯಾನಿಕ್ ಆಗಿದ್ದು, ಬಾರಂಡಪಲ್ಲಿಯಲ್ಲಿ ಎಲೆಕ್ಟ್ರಿಕ್ ಅಂಗಡಿಯನ್ನು ಕೂಡ ನಡೆಸುತ್ತಿದ್ದರು. ಸಾವನ್ನಪ್ಪಿರುವ ತಾಯಿ ನೂರ್ಜಾನ್ ಮನೆಯಲ್ಲಿಯೇ ಇರುತ್ತಿದ್ದರು. ಮಗಳು 10ನೇ ತರಗತಿಯವರೆಗೆ ಓದಿ, ಕಂಪ್ಯೂಟರ್ ಕ್ಲಾಸ್ ಗೆ ಹೋಗುತ್ತಿದ್ದರು. ಮೆಹಬೂಬ್ ಮನೆಯಿಂದ ಹೊರಗೆ ಹೋಗುತ್ತಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮಧ್ಯೆ ಜಗಳ ನಡೆಯಿತೇ ? ಅಥವಾ ಇನ್ನಾವುದೋ ಬಲವಾದ ಕಾರಣಗಳಿವೆಯೇ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯ ಬಾಗಿಲು ಮುರಿದು ಒಳ ಹೋಗಿ, ಮೃತ ದೇಹಗಳನ್ನು ಹೊರಗೆ ತೆಗೆದಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...