ತುಮಕೂರು: ತಾಯಿ ಹಾಗೂ ಮಗಳನ್ನು ಹತ್ಯೆಗೈದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ಮಧುಗಿರಿ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.
2018ರ ಏಪ್ರಿಲ್ 9ರಂದು ಪಾವಗಡ ತಾಲೂಕಿನ ಗೌಡೇಟಿ ಗ್ರಾಮದಲ್ಲಿ ನಡೆದಿದ್ದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನಾಳೆ ತೆರೆಮೇಲೆ ಬರಲಿದೆ ವರುಣ್ ತೇಜ್ ಅಭಿನಯದ ‘ಗನಿ’ ಸಿನಿಮಾ
ಪತ್ನಿ ಮೇಲಿನ ಅನುಮಾನಕ್ಕೆ ಮಂಜುನಾಥ್ ಎಂಬಾತ ಅನೈತಿಕ ಸಂಬಂಧದ ಆರೋಪ ಮಾಡಿ ಕಟ್ಟಿಗೆಯಿಂದ ಹೊಡೆದು ಕೊಂದಿದ್ದ. ಈ ವೇಳೆ ತಪ್ಪಿಸಲು ಹೋದ ಮಗಳ ಮೇಲೆಯೂ ಹಲ್ಲೆ ನಡೆಸಿದ್ದ, ತಾಯಿ ರಾಮಾಂಜಿನಮ್ಮ, ಮಗಳು ನಾಗಮಣಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇದೀಗ ಮಧುಗಿರಿ ಸೆಷನ್ಸ್ ನ್ಯಾಯಾಲಯ ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.