alex Certify ತಾವು ಪ್ರತಿನಿಧಿಸುವ ಕ್ಷೇತ್ರದಲ್ಲೂ ‘ಕೈ’ ಟಿಕೆಟ್ ಗೆ ಅರ್ಜಿ ಸ್ವೀಕಾರ; ಹಾಲಿ ಶಾಸಕರುಗಳು ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾವು ಪ್ರತಿನಿಧಿಸುವ ಕ್ಷೇತ್ರದಲ್ಲೂ ‘ಕೈ’ ಟಿಕೆಟ್ ಗೆ ಅರ್ಜಿ ಸ್ವೀಕಾರ; ಹಾಲಿ ಶಾಸಕರುಗಳು ಗರಂ

ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸುವ ಆಕಾಂಕ್ಷಿಗಳಿಂದ ಕಾಂಗ್ರೆಸ್ ಪಕ್ಷ ಅರ್ಜಿ ಆಹ್ವಾನಿಸಿದ್ದು, ಇದಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅರ್ಜಿ ಜೊತೆಗೆ ನಿಗದಿಪಡಿಸಿದ್ದ ಶುಲ್ಕದ ಕುರಿತು ಟೀಕೆ ಕೇಳಿ ಬಂದಿತ್ತಾದರೂ ದೊಡ್ಡ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.

ಇದರ ಮಧ್ಯೆ ಸೋಮವಾರದಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಇದರಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮೊದಲಾದವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರಗಳಿಂದಲೂ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿರುವುದಕ್ಕೆ ಹಾಲಿ ಕಾಂಗ್ರೆಸ್ ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದವರು ತಾವೇ ಮುಂದಿನ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದು, ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ ಎಂದು ತಮ್ಮ ಮನದಾಳದ ಮಾತು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...