
ಶುಕ್ರವಾರದಂದು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದರು.
ಇದಾದ ಬಳಿಕ ಶನಿವಾರದಂದು ಕೇರಳದ ಪ್ರಸಿದ್ಧ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು, ಅನ್ನದಾನಕ್ಕಾಗಿ 1.5 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮುಕೇಶ್ ಅಂಬಾನಿ ಅವರೊಂದಿಗೆ ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಸಹ ಹಾಜರಿದ್ದರು.