alex Certify ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ; 17 ಕುರಿಗಳ ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ; 17 ಕುರಿಗಳ ದಾರುಣ ಸಾವು

ವಿಜಯನಗರ: ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ 17 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿ ನಡೆದಿದೆ.

ಕಾನಹೊಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಪರಪ್ಪ ಎಂಬುವವರಿಗೆ ಸೇರಿದ 13 ಕುರಿಗಳು, 2 ಟಗರು, 2 ಮೇಕೆ ಮೃತಪಟ್ಟಿವೆ. ಸಧ್ಯ ಕುರಿಗಳ ಪಕ್ಕದಲ್ಲೇ ಇದ್ದ ಪರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುರಿ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...