ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ.
ಬುಧವಾರದಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಮಾನ್ಸೂನ್ ನಲ್ಲಿ ತ್ವಚೆಯ ‘ಆರೈಕೆ’ ಹೀಗಿರಲಿ
ತುಟ್ಟಿಭತ್ಯೆ ಹೆಚ್ಚಳ ಕಳೆದ ವರ್ಷವೇ ಘೋಷಣೆ ಆಗಬೇಕಿತ್ತಾದರೂ ಕೊರೊನಾ ಕಾರಣಕ್ಕೆ ಇದಕ್ಕೆ ತಡೆ ನೀಡಲಾಗಿತ್ತು. ಪ್ರಸ್ತುತ ಕೊರೊನಾ ಎರಡನೇ ಅಲೆ ಇರುವ ಕಾರಣ ಈ ಬಾರಿಯೂ ತುಟ್ಟಿಭತ್ಯೆ ಹೆಚ್ಚಳ ಸಿಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿದ್ದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಕೊನೆಗೂ ನೆಮ್ಮದಿ ನೀಡಿದೆ.