alex Certify ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದೆ ಹ್ಯಾಟ್ರಿಕ್ ಹೀರೋ – ಸೂಪರ್ ಸ್ಟಾರ್ ಜೋಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದೆ ಹ್ಯಾಟ್ರಿಕ್ ಹೀರೋ – ಸೂಪರ್ ಸ್ಟಾರ್ ಜೋಡಿ

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಇದೇ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ರಜನಿಕಾಂತ್ ನಟಿಸುತ್ತಿರುವ ತಲೈವರ್ 169 ಚಿತ್ರದಲ್ಲಿ ಶಿವಣ್ಣ ಅವರೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಲಿದ್ದಾರೆ.

ಅಂದಹಾಗೆ, ಈ ವಿಚಾರವನ್ನು ಸ್ವತಃ ಶಿವಣ್ಣ ಹೇಳಿಕೊಂಡಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರದ ಶೂಟಿಂಗ್ ಮುಂದಿನ ಆಗಸ್ಟ್ ನಲ್ಲಿ ಆರಂಭವಾಗುವ ನಿರೀಕ್ಷೆ ಇದ್ದು, ಶಿವಣ್ಣ ಮತ್ತು ರಜನಿಕಾಂತ್ ಜೊತೆಯಲ್ಲಿ ಸೆಪ್ಟಂಬರ್ ನಲ್ಲಿ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವರಾಜ್ ಕುಮಾರ್, ಜೊತೆಗೆ ನಟಿಸುತ್ತಿರುವುದು ಒಂದು ಉತ್ತಮ ಅವಕಾಶವಾಗಿದ್ದು, ಇದರಿಂದ ನನಗೆ ಅತ್ಯಂತ ಖುಷಿಯಾಗಿದೆ. ರಜನಿಕಾಂತ್ ಅವರು ನನಗೆ ಬಾಲ್ಯದಿಂದಲೂ ಪರಿಚಿತರಾಗಿದ್ದಾರೆ. ಯಾವುದೇ ಪಾತ್ರವಿರಲಿ. ಈ ಚಿತ್ರದ ಭಾಗವಾಗುತ್ತಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ರಜನಿಕಾಂತ್ ಸರ್ ಮತ್ತು ನನ್ನನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ ಎಂಬ ವಿಶ್ವಾಸ ನನ್ನದಾಗಿದೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...