
ಮಹೇಶ್ ಗೌಡ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಈ ಟೀಸರ್ ಬಿಡುಗಡೆಯಾದ 15 ನಿಮಿಷಗಳಲ್ಲಿ 8 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.
ಅಧ್ವಿತಿ ಶೆಟ್ಟಿ ಲೇಟೆಸ್ಟ್ ಫೋಟೋಶೂಟ್
ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಈ ಟೀಸರ್ ಅನ್ನು ರಿಲೀಸ್ ಮಾಡಲಾಗಿದೆ. ಈ ಚಿತ್ರದಲ್ಲಿ ಅದಿತಿ ಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್ ಸೇರಿದಂತೆ ಮೂವರು ನಾಯಕಿಯರು ಅಭಿನಯಿಸಿದ್ದಾರೆ. ಸಾಯಿ ಕಾರ್ತಿಕ್ ಈ ಸಿನಿಮಾ ಹಾಡುಗಳ ಸಂಯೋಜನೆ ಮಾಡಿದ್ದಾರೆ. ಇಂದು ಟೀಸರ್ ವೀಕ್ಷಿಸಿದ ಪ್ರೇಕ್ಷಕರಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.