ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಹೀನಾಯ ಸೋಲು ಕಂಡಿದೆ. ಇದರ ಬೆನ್ನಲ್ಲಿಯೇ ವೆಸ್ಟ್ ಇಂಡೀಸ್ ನಲ್ಲಿ ಸರಣಿ ನಡೆಯಲಿದ್ದು, ಭಾರತೀಯ ತಂಡ ಪ್ರಕಟವಾಗಿದೆ.
ಗಾಯದ ಸಮಸ್ಯೆಯಿಂದ ತಂಡದಿಂದ ಹಿಂದೆ ಉಳಿದಿದ್ದ ಭಾರತೀಯ ಕ್ರಿಕೆಟ್ ನ ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾ ಮತ್ತೆ ತಂಡ ಸೇರಿದ್ದಾರೆ. ರೋಹಿತ್ ನೇತೃತ್ವದ 18 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಹಲವು ಪ್ರಮುಖ ಆಟಗಾರರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಆಡಿ ಸೋಲು ಕಂಡಿದ್ದ ಭಾರತ ಕ್ರಿಕೆಟ್ ತಂಡದ ಭಾಗವಾಗಿದ್ದ ಐವರನ್ನು ಬಿಸಿಸಿಐ ಕೈ ಬಿಟ್ಟಿದೆ. ಕುಲದೀಪ್ ಯಾದವ್ ಮರಳಿ ತಂಡ ಸೇರಿಕೊಂಡಿದ್ದರೆ, ಇದೇ ಮೊದಲ ಬಾರಿಗೆ ಸ್ಪಿನ್ನರ್ ದೀಪಕ್ ಹೂಡಾ ಹಾಗೂ ರವಿ ಬಿಷ್ಣೋಯ್ ತಂಡಕ್ಕೆ ಸೇರಿದ್ದಾರೆ.
ಜಸ್ ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಏಕದಿನ ಪಂದ್ಯಗಳಿಗಾಗಿ ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಚುಟುಕು ಪಂದ್ಯದಲ್ಲಿ ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್ ಸ್ಥಾನ ಪಡೆದಿದ್ದಾರೆ.