alex Certify ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಮರ್ಡರ್; ನಾಲ್ಕು ಕಡೆಗಳಲ್ಲಿ ಶಾಲೆಗಳಿಗೆ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಮರ್ಡರ್; ನಾಲ್ಕು ಕಡೆಗಳಲ್ಲಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡದಲ್ಲಿ ಕೇವಲ 10 ದಿನಗಳ ಅವಧಿಯಲ್ಲಿ ಮೂರನೇ ಹತ್ಯೆಯಾಗಿದೆ. ಮೊದಲು ಮಸೂದ್ ಎಂಬಾತನ ಕೊಲೆಯಾಗಿದ್ದು, ಆ ಬಳಿಕ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿತ್ತು. ಗುರುವಾರ ರಾತ್ರಿ ಸುರತ್ಕಲ್ ಹೊರವಲಯದಲ್ಲಿ ಮಹಮ್ಮದ್ ಫಾಸಿಲ್ ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ.

ಈ ಸರಣಿ ಹತ್ಯೆಗಳಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಮಂಗಳೂರು ಸುತ್ತಮುತ್ತ ಪ್ರಕ್ಷುಬ್ಧ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್, ಪಣಂಬೂರು, ಬಜ್ಪೆ ಮತ್ತು ಮುಲ್ಕಿ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನಡೆದಿರುವ ಈ ಸರಣಿ ಹತ್ಯೆಗಳಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...