ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪೈಕಿ ಹಲವು ಶಿಕ್ಷಕರು ದಯಾಮರಣ ಕೋರಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 300ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಸಿಎಂ, ರಾಜ್ಯಪಾಲರು ಹಾಗೂ ರಾಷ್ಟ್ರಪತಿ ಅವರಿಗೆ ಪತ್ರ ಬರೆದು ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಲವು ದಿನಗಳಿಂದ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ದಯಾಮರಣಕ್ಕೆ ಅರ್ಜಿ ಸಲ್ಲಿಸಿ ಪೋಸ್ಟ್ ಮಾಡಿದ್ದಾರೆ.
ಈಗಾಗಲೇ ಸರ್ಕಾರವು ಅತಿಥಿ ಉಪನ್ಯಾಸಕರ ವಿಷಯದಲ್ಲಿ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಉಪನ್ಯಾಸಕರ ಗೌರವ ಧನವನ್ನು ಹೆಚ್ಚಿಸಿ ಸರ್ಕಾರವು ಆದೇಶ ಹೊರಡಿಸಿದೆ.
ಇಲ್ಲಿಯವರೆಗೆ 11 ಸಾವಿರ ರೂ. ಸಂಬಳ ಪಡೆಯುತ್ತಿದ್ದವರಿಗೆ 32 ಸಾವಿರದವರೆಗೆ ಸಂಬಳ ಹೆಚ್ಚಿಸಲಾಗಿದೆ. ಇದರೊಂದಿಗೆ ಪಾಠದ ಅವಧಿಯನ್ನು ಕೂಡ ಹೆಚ್ಚಿಸಲಾಗಿದೆ. ಹೀಗಾಗಿ ಪ್ರತಿಭಟನೆ ಕೈ ಬಿಟ್ಟು ಕೆಲಸಕ್ಕೆ ಹಾಜರಾಗಬೇಕೆಂದು ಸರ್ಕಾರ ಮನವಿ ಮಾಡುತ್ತಿದೆ. ಆದರೂ ಅತಿಥಿ ಉಪನ್ಯಾಸಕರು ಮಾತ್ರ ತಮ್ಮ ಇನ್ನೂ ಹಲವು ಬೇಡಿಕೆ ಈಡೇರಿಸಬೇಕೆಂದು ಮನವಿ ಮಾಡುತ್ತಿದ್ದಾರೆ.