ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರದಂದು ಬಂಧಿಸಿದ್ದಾರೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸುರೇಶ್ ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಭೀಮನ ಕಟ್ಟೆ ಆನೆ ಶಿಬಿರ ಬಳಿಯ ಜಮೀನಿಗೆ ಬಲರಾಮ ಹೋದ ಕಾರಣ ಜಮೀನಿನ ಮಾಲೀಕ ಸುರೇಶ್ ಗುಂಡು ಹಾರಿಸಿದ್ದ. ಇದರಿಂದಾಗಿ ಬಲರಾಮನ ಬಲ ತೊಡೆಯ ಬಳಿ ಗುಂಡು ಹೊಕ್ಕಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾನೆ.
ನಾಡಹಬ್ಬ ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಹೆಗ್ಗಳಿಕೆ ಬಲರಾಮನಿಗೆ ಇದೆ.