ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಅರಮನೆ ಆವರಣಕ್ಕೆ ಬಂದ ಗಜಪಡೆಯನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಎಸ್.ಟಿ. ಸೋಮಶೇಖರ್ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಿದರು.
ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದಲ್ಲಿ 8 ಆನೆಗಳು ಅರಮನೆ ಆವರಣ ಜಯಮಾರ್ತಾಂಡ ದ್ವಾರ ಪ್ರವೇಶಿಸಿದ್ದು, ಬೆಳಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು. ಮಂಗಳ ವಾದ್ಯ, ಪೂರ್ಣ ಕುಂಭ ಸ್ವಾಗತದ ಮೂಲಕ ಆನೆಗಳನ್ನು ಬರಮಾಡಿಕೊಳ್ಳಲಾಯಿತು.
ಕೊರೊನಾ ಲಘು ಸೋಂಕಿಗೊಳಗಾಗಿದ್ದವರಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್
ಈ ವೇಳೆ ಮಾತನಾಡಿದ ಸಚಿವ ಸೋಮಶೇಖರ್, ಅ.7ರಂದು ದಸರಾ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಅ.15ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ. ಸೆ.23ರವರೆಗೆ ಅಧಿವೇಶನ ಇರುವುದರಿಂದ ದಸರಾ ಉದ್ಘಾಟನೆ ಯಾರಿಂದ ಎಂಬುದು ಇನ್ನೂ ತೀರ್ಮಾನವಾಗಿಲ್ಲ, ಅಧಿವೇಶನದ ಬಳಿಕ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.
ದಸರಾ ಉದ್ಘಾಟನೆಗೆ ಗಣ್ಯರ ಆಯ್ಕೆಯನ್ನು ದಸರಾ ಉನ್ನತಾಧಿಕಾರ ಸಮಿತಿಯಲ್ಲಿ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಸಂಬಂಧ ಯಾರಾದರೂ ಸಲಹೆ ಕೊಡಬಹುದು. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತರುತ್ತೇನೆ. ಆಯ್ಕೆ ಮುಖ್ಯಮಂತ್ರಿ ಅವರಿಗೆ ಸೇರಿದ್ದು ಎಂದು ಹೇಳಿದರು.