alex Certify ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದ ಪೊಲೀಸ್ ಪೇದೆ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದ ಪೊಲೀಸ್ ಪೇದೆ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆ…!

ಕಲಬುರ್ಗಿ: ಹಸೆಮಣೆಯೇರಲು ಭರ್ಜರಿ ಸಿದ್ಧತೆ ನಡೆಸಿದ್ದ ಪೊಲೀಸ್ ಪೇದೆ ಮದುವೆಗೆ ಒಂದು ವಾರ ಬಾಕಿ ಇದೆ ಎನ್ನುವಾಗ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆ ಸಾವಳಗಿಯಲ್ಲಿ ನಡೆದಿದೆ.

ಮದರಾ ಗ್ರಾಮದ ನಿವಾಸಿ ಶ್ರೀನಾಥ್ (25) ಶವವಾಗಿ ಪತ್ತೆಯಾದ ಪೊಲೀಸ್ ಪೇದೆ. ಶ್ರೀನಾಥ್ ಕಲಬುರ್ಗಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಶ್ರೀನಾಥ್ ಮದುವೆಗೆ ಒಂದು ವಾರ ಬಾಕಿ ಇತ್ತು. ಭರ್ಜರಿ ಸಿದ್ಧತೆಯನ್ನೂ ನಡೆಸಿದ್ದರು. ಆದರೆ ಇದೀಗ ಶ್ರೀನಾಥ್ ಶವ ಸಾವಳಗಿ ಬಳಿ ರೈಲ್ವೆ ಹಳಿ ಮೇಲೆ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೇದೆ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...