alex Certify ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆಗೆ ಪ್ರಧಾನಿ ಮೋದಿ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆಗೆ ಪ್ರಧಾನಿ ಮೋದಿ ಕರೆ

ಹಿಮಾಚಲ ಪ್ರದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಮತದಾರರಿಗೆ ಮನವಿ ಮಾಡಿದ್ದಾರೆ. ಇಂದು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಲಿರುವ ಯುವ ಮತದಾರರಿಗೆ ಟ್ವೀಟ್‌ನಲ್ಲಿ ಪ್ರಧಾನಿ ಶುಭಾಶಯ ಕೋರಿದ್ದಾರೆ.

“ಇಂದು ಹಿಮಾಚಲ ಪ್ರದೇಶದ ಎಲ್ಲಾ ವಿಧಾನಸಭಾ ಸ್ಥಾನಗಳಿಗೆ ಮತದಾನದ ದಿನವಾಗಿದೆ. ದೇವಭೂಮಿಯ ಎಲ್ಲಾ ಮತದಾರರು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ ಉತ್ಸಾಹದಿಂದ ಭಾಗವಹಿಸಲು ಮತ್ತು ಮತದಾನದ ಹೊಸ ದಾಖಲೆಯನ್ನು ಸೃಷ್ಟಿಸಲು ನಾನು ವಿನಂತಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು 55 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 8 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...