ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಯೋಜನೆ, ಸೌಲಭ್ಯ ಸಿಗುವಂತಾಗಬೇಕೆಂಬ ಕಲ್ಪನೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಇ ಶ್ರಮ್ ಪೋರ್ಟಲ್ಗೆ ಈವರೆಗೆ ದಾಖಲೆ ಸಂಖ್ಯೆಯಲ್ಲಿ ನೋಂದಣಿಯಾಗಿದೆ.
ಇ-ಶ್ರಮ್ ಪೋರ್ಟಲ್ನಲ್ಲಿ 14 ಕೋಟಿಗೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.
ಕೇವಲ 4 ತಿಂಗಳಲ್ಲಿ 14 ಕೋಟಿ ನೋಂದಣಿ ದಾಟಿದೆ. ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ವಂದನೆಗಳು. ಎಂದು ಯಾದವ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
BIG NEWS: ಕೃಷಿ ಕಾಯ್ದೆ ಮತ್ತೆ ಜಾರಿ ಬಗ್ಗೆ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟನೆ
ಸಚಿವರ ಪ್ರಕಾರ 14,02,92,825 ಇ-ಶ್ರಮ್ ಕಾರ್ಡ್ಗಳನ್ನು ವಿತರಿಸಲಾಗಿದೆ. ಇದು ಭಾರತದಲ್ಲಿನ ಅಸಂಘಟಿತ ವಲಯದಲ್ಲಿನ ಒಟ್ಟು ಉದ್ಯೋಗಿಗಳ ಸುಮಾರು ಮೂರನೇ ಒಂದು ಭಾಗವಾಗಿದೆ.
ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ರಚಿಸಲು ಸರ್ಕಾರವು ಇ-ಶ್ರಮ್ ಪೋರ್ಟಲ್ (www.eshram.gov.in) ಅನ್ನು ಆಗಸ್ಟ್ 26ರಂದು ಪ್ರಾರಂಭಿಸಿತು. ಇದು ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಕೆಲಸಗಾರರು ಮತ್ತು ಬೀದಿ ವ್ಯಾಪಾರಿಗಳು, ಮನೆ ಕೆಲಸಗಾರರು, ಕೃಷಿ ಕಾರ್ಮಿಕರು ಇತ್ಯಾದಿಗಳನ್ನು ಒಳಗೊಂಡಂತೆ ಇನ್ನೂ ಹಲವು ವರ್ಗದ ಕಾರ್ಮಿಕರನ್ನು ನೋಂದಾಯಿಸಿಕೊಳ್ಳುತ್ತಿದೆ.
ಡಿಸೆಂಬರ್ ಆರಂಭದಲ್ಲಿ ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ತಲುಪಿಸಲು ಆಧಾರ್ ಲಿಂಕ್ ಹೊಂದಿರುವ ಇ-ಶ್ರಮ್ ಪೋರ್ಟಲ್ ಅನ್ನು ಮುಂದಿನ ದಿನಗಳಲ್ಲಿ ಬಳಸಲಾಗುತ್ತದೆ.