ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿರುವ ನಡುವೆಯೇ ಬಿ.ಎಸ್.ವೈ. ಪುತ್ರ ಸಂಸದ ಬಿ.ವೈ. ರಾಘವೇಂದ್ರ ದಿಢೀರ್ ದೆಹಲಿಗೆ ಪ್ರಯಾಣಿಸಿದ್ದಾರೆ.
ಕೆಐಎಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, 2 ತಿಂಗಳ ಹಿಂದೆಯೇ ಯಡಿಯೂರಪ್ಪ ರಾಜೀನಾಮೆಗೆ ನಿರ್ಧರಿಸಿದ್ದರು. ಅದರಂತೆ ನಿನ್ನೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಸಿಎಂ ಯಾರಾಗಬೇಕು ಎಂಬ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ ಎಂದರು.
BIG NEWS: ಬಿ.ಎಸ್.ವೈ. ರಾಜೀನಾಮೆ ವಿಚಾರ; ಖುಷಿ ಖುಷಿಯಾಗಿದ್ದೇವೆ ಎಂದ ಎಂಟಿಬಿ
ಸಚಿವ ಸಂಪುಟದಲ್ಲಿ ಯಡಿಯೂರಪ್ಪನವರ ಪಾತ್ರವೇ ಇಲ್ಲ ಎಂದ ಮೇಲೆ ಇನ್ನು ಅವರ ಮಕ್ಕಳ ಪಾತ್ರ ಎಲ್ಲಿಂದ ಬರುತ್ತೆ. ಪಕ್ಷ ಸಂಘಟನೆ ಕಾರಣದಿಂದ ನಾನು ಸಂಸದನಾಗಿದ್ದೇನೆ. ಬಿ.ವೈ. ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಅವರು ರಾಜ್ಯ ಸರ್ಕಾರ ಹಾಗೂ ಪಕ್ಷದ ಸೇತುವೆಯಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.