ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಎಲ್ಲಾ ರೀತಿಯ ಸವಲತ್ತುಗಳನ್ನು ಹೊಂದಿರುವ ವ್ಯಕ್ತಿ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಅಖಿಲೇಶ್ ಯಾದವ್ ಹೆಚ್ಚಿನ ಸಮಯ ನಿದ್ದೆಯಲ್ಲಿಯೇ ಕಳೆದಿದ್ದರಿಂದ ಅವರಿಗೆ ಬಿಜೆಪಿ ಸರ್ಕಾರದ ಯೋಜನೆಗಳು ಹಾಗೂ ಕೊರೊನಾ ಲಸಿಕೆ ಅಭಿಯಾನಗಳ ಬಗ್ಗೆ ಮಾಹಿತಿ ತಿಳಿದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಅಖಿಲೇಶ್ ಯಾದವ್ ದಿನದಲ್ಲಿ 12 ಗಂಟೆ ನಿದ್ರಿಸಿದ್ದಾರೆ ಹಾಗೂ ತಮ್ಮ ಸ್ನೇಹಿತರ ಜೊತೆಯಲ್ಲಿ ಆರು ಗಂಟೆಗಳ ಕಾಲ ಮೋಜು ಮಸ್ತಿ ಮಾಡುತ್ತಾರೆ ಎಂದು ಯೋಗಿ ಆದಿತ್ಯನಾಥ್ ಲೇವಡಿ ಮಾಡಿದ್ದಾರೆ.
ಸಂದರ್ಶನವೊಂದರಲ್ಲಿ ಈ ವಿಚಾರವಾಗಿ ಮಾತನಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಮಾಜವಾದಿ ಪಕ್ಷದ ಮುಖ್ಯಸ್ಥರೇ ತಮ್ಮ ಪಕ್ಷದ ನಾಯಕ ಅಜಂ ಖಾನ್ ಜೈಲಿನಿಂದ ಹೊರಬರುವುದನ್ನು ಬಯಸುತ್ತಿಲ್ಲ. ಏಕೆಂದರೆ ಅಜಂ ಜೈಲಿನಿಂದ ಹೊರಬಂದರೆ ತಮ್ಮ ಸ್ಥಾನಕ್ಕೆ ಅಪಾಯ ಉಂಟಾಗಬಹುದು ಎಂಬ ಭೀತಿ ಇದಕ್ಕೆ ಕಾರಣ ಎಂದು ಹೇಳುವ ಮೂಲಕ ಅಖಿಲೇಶ್ ಯಾದವ್ಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಅಲ್ಲದೇ ಈ ಬಾರಿಯ ವಿಧಾನಸಭಾ ಚುನಾವಣೆಯ ವಿಚಾರದಲ್ಲಿಯೂ ಮಾತನಾಡಿದ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಬಿಜೆಪಿಯು ಬಹುಮತಗಳಿಂದ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ಪಡಿಸಿದ್ದಾರೆ.