ನವದೆಹಲಿ: ಇಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ್ದು, ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ಬಿ.ಎಸ್.ವೈ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಬದಲಾವಣೆ ವಿಚಾರವಾಗಿ ದಿನಕ್ಕೊಂದು ಸುದ್ದಿ ಬರುತ್ತೆ, ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ ? ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳೂ ಇಲ್ಲ ಎಂದಿದ್ದಾರೆ.
BIG NEWS: ಐಪಿಎಸ್ ಅಧಿಕಾರಿ ರವಿ.ಡಿ.ಚನ್ನಣ್ಣನವರ್ ಸಹೋದರ ಎಂದು ಅರ್ಚಕನಿಂದ ವಂಚನೆ
ಸಿಎಂ ಯಡಿಯೂರಪ್ಪ 2 ವರ್ಷ ಚೆನ್ನಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಬಿಎಸ್ವೈ ಸಂಪುಟದಲ್ಲಿ ನಾನೂ ಕೂಡ ಸಚಿವನಾಗಿದ್ದೆ. ಪಕ್ಷ ನೀಡಿದ ಜವಾಬ್ದಾರಿಯನ್ನು ನಾವೆಲ್ಲರೂ ನಿರ್ವಹಿಸುತ್ತೇವೆ ಎಂದು ಹೇಳಿದರು.