
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಅನುಪಮ್ ಖೇರ್, ಪಲ್ಲವಿ ಜೋಶಿ ಮೊದಲಾದವರ ಅಭಿನಯವಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರ ಭರ್ಜರಿ ಯಶಸ್ಸು ಸಾಧಿಸಿತ್ತು.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆಯ ಕುರಿತು ಹೇಳುವ ಕಥಾ ಹಂದರವನ್ನು ಈ ಚಿತ್ರ ಹೊಂದಿದ್ದು, ಬಹುತೇಕ ರಾಜ್ಯಗಳು ಈ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದವು.
ಇದೀಗ ‘ದಿ ಕಾಶ್ಮೀರ್ ಪೈಲ್ಸ್’ ಚಿತ್ರವನ್ನು ಗುರುವಾರದಿಂದ ಮರು ಬಿಡುಗಡೆ ಮಾಡಲಾಗುತ್ತಿದೆ. ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರೇ ಇದನ್ನು ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ತಿಳಿಸಿದ್ದಾರೆ.