alex Certify ದೀದಿ ಸರ್ಕಾರದಿಂದ ಪಶ್ಚಿಮ ಬಂಗಾಳ ಬಿಜೆಪಿಗೆ ಮತ್ತೊಂದು ‘ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀದಿ ಸರ್ಕಾರದಿಂದ ಪಶ್ಚಿಮ ಬಂಗಾಳ ಬಿಜೆಪಿಗೆ ಮತ್ತೊಂದು ‘ಶಾಕ್’

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಬೇಕೆಂಬ ಕಾರಣಕ್ಕೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಾಕಷ್ಟು ತಂತ್ರಗಾರಿಕೆ ನಡೆಸಿತ್ತಾದರೂ ಪ್ರಯೋಜನವಾಗಿರಲಿಲ್ಲ. ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಶಾಸಕ-ಸಂಸದರನ್ನು ಸೆಳೆದುಕೊಂಡು ಕಣಕ್ಕಿಳಿದಿದ್ದರೂ ಅಧಿಕಾರದ ಗದ್ದುಗೆ ಪಡೆಯಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪಶ್ಚಿಮ ಬಂಗಾಳದ ಚುಕ್ಕಾಣಿ ಹಿಡಿದಿದೆ.

ಇದಾದ ಬಳಿಕ ತೃಣಮೂಲ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಬಹುತೇಕರು ಮಾತೃಪಕ್ಷಕ್ಕೆ ಮರಳಲು ಮುಂದಾಗುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದರು. ಇದೇ ರೀತಿ ಪಶ್ಚಿಮ ಬಂಗಾಳದ ಪ್ರಭಾವಿ ನಾಯಕ ಮುಕುಲ್ ರಾಯ್ ಬಿಜೆಪಿ ತೊರೆದು ತಮ್ಮ ಮಾತೃಪಕ್ಷ ಟಿಎಂಸಿ ಸೇರ್ಪಡೆಯಾಗಿದ್ದರು. ಇದೇ ಹಾದಿಯನ್ನು ಇನ್ನೂ ಹಲವರು ತುಳಿಯಲು ಮುಂದಾಗಿರುವ ಮಧ್ಯೆ ದೀದಿ ಸರ್ಕಾರ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದೆ.

ʼತೀರ್ಥಹಳ್ಳಿʼ ತಾಲ್ಲೂಕಿನ ಪ್ರವಾಸಿ ಸ್ಥಳಗಳು

ಸಂಪ್ರದಾಯದಂತೆ ಪಶ್ಚಿಮಬಂಗಾಳ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ ಪ್ರತಿಪಕ್ಷದ ಶಾಸಕರನ್ನು ನೇಮಿಸುವ ವಾಡಿಕೆಯಿದ್ದು, ಆದರೆ ಮಮತಾ ಬ್ಯಾನರ್ಜಿ ಸರ್ಕಾರ ಮುಕುಲ್ ರಾಯ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿದೆ. ಮುಕುಲ್ ರಾಯ್ ಬಿಜೆಪಿ ತೊರೆದು ತಮ್ಮ ಮಾತೃಪಕ್ಷ ಟಿಎಂಸಿ ಸೇರ್ಪಡೆಯಾಗಿದ್ದರೂ ಸಹ ಬಿಜೆಪಿಗೆ ರಾಜೀನಾಮೆ ನೀಡಿಲ್ಲ. ಹಾಗಾಗಿ ಅವರು ಈಗಲೂ ಸಹ ಬಿಜೆಪಿ ಶಾಸಕರಾಗಿದ್ದಾರೆ.

ಇದನ್ನೇ ಮುಂದಿಟ್ಟುಕೊಂಡು ಮುಕುಲ್ ರಾಯ್ ಅವರನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಮಮತಾ ಬ್ಯಾನರ್ಜಿ ತಂತ್ರಗಾರಿಕೆ ಮೆರೆದಿದ್ದಾರೆ. ಮುಕುಲ್ ರಾಯ್ ಅವರ ಶಾಸಕತ್ವವನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸುವಂತೆ ಬಿಜೆಪಿ ಮನವಿ ಮಾಡಿದ್ದರೂ ಸಹ ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...