alex Certify ದುನಿಯಾ ವಿಜಯ್ ಗೆ ಪಿತೃವಿಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುನಿಯಾ ವಿಜಯ್ ಗೆ ಪಿತೃವಿಯೋಗ

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ವಿಜಯ್ ತಂದೆ ರುದ್ರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎರಡು ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರುದ್ರಪ್ಪ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಆನೇಕಲ್ ನ ಕುಂಬಾರಹಳ್ಳಿಯಲ್ಲಿ ವಿಜಯ್ ತಂದೆ ಅತ್ಯಕ್ರಿಯೆ ನಡೆಯಲಿದೆ. ಕಳೆದ ಜುಲೈ ನಲ್ಲಿ ವಿಜಯ್ ತಾಯಿ ನಾರಾಯಣಮ್ಮ ವಿಧಿವಶರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...