2017 ರ ಆಗಸ್ಟ್ ನಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ರಸ್ತೆ ಮಧ್ಯೆ ಅಡ್ಡಗಟ್ಟಿದ್ದ ಯುವಕ, ಆಕೆಯ ದುಪ್ಪಟ್ಟಾ ಹಿಡಿದೆಳೆದು ಬಳಿಕ ಕೈ ಹಿಡಿದು ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ. ಅಲ್ಲದೇ ಇದಕ್ಕೆ ಒಪ್ಪದಿದ್ದರೆ ಆಸಿಡ್ ಹಾಕುವುದಾಗಿ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಾಂದಿ, ಪೋಸ್ಕೋ ಕಾಯ್ದೆ ಸೆಕ್ಷನ್ 8 ಹಾಗೂ 12 ಮತ್ತು ಭಾರತೀಯ ದಂಡ ಸಂಹಿತೆ ಪ್ರಕ್ರಿಯೆ 354, 354B, 506 ಮತ್ತು 509 ಅಡಿ ಶಿಕ್ಷೆ ವಿಧಿಸಿದ್ದರು. ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ.
ಇದೀಗ ಕೋಲ್ಕತ್ತಾ ಹೈಕೋರ್ಟ್ ಈ ಎಲ್ಲ ಪ್ರಕರಣಗಳನ್ನು ಕೈಬಿಟ್ಟಿದೆ. ಆದರೆ ಭಾರತೀಯ ದಂಡ ಸಂಹಿತೆ ಪ್ರಕ್ರಿಯೆ 354(1)(ii) ಹಾಗೂ 506 ರ ಅನ್ವಯ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪರಿಗಣಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದೆ.