ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಜಾಸ್ತಿಯಾಗ್ತಾ ಇದೆ. ಕಳೆದ 24 ಗಂಟೆಗಳಲ್ಲಿ ಒಟ್ಟು ಪರೀಕ್ಷೆಗೆ ಒಳಗಾದವರ ಪೈಕಿ ಪಾಸಿಟಿವ್ ರೋಗಿಗಳ ಸಂಖ್ಯೆ ಶೇ.2.70ರಷ್ಟಿದೆ. ಇದಕ್ಕೂ ಮೊದಲು ಪಾಸಿಟಿವಿಟಿ ದರ ಕೇವಲ ಶೇ.1ರಷ್ಟಿತ್ತು. ನೋಯ್ಡಾದ ಶಾಲೆಯೊಂದರ 13 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಖೇತಾನ್ ಪಬ್ಲಿಕ್ ಶಾಲೆಯ 13 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮೂವರು ಶಿಕ್ಷಕರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಲೆಗೆ ಬೀಗ ಜಡಿಯಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಒಟ್ಟು 5079 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 137 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ.
ಈ ಮೂಲಕ ಕೊರೊನಾ ಪಾಸಿಟಿವಿಟಿ ದರ ಶೇ.2.70ಕ್ಕೆ ಏರಿಕೆಯಾಗಿದೆ. 144 ರೋಗಿಗಳು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕೊರೊನಾದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.