ಪುರಿಯ ಜಗನ್ನಾಥ ದೇವರ ದರ್ಶನ ಪಡೆದ 72 ವರ್ಷದ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ದೇಗುಲಕ್ಕೆ ಭೇಟಿ ನೀಡಲು ಬಂದಿದ್ದ ಛತ್ತೀಸ್‌ಗಢದ ವೃದ್ಧರೊಬ್ಬರು ಭಾನುವಾರ ಬೆಳಗ್ಗೆ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಕೆಲವೇ ಕ್ಷಣಗಳಲ್ಲಿ ಇಹಲೋಕ ತ್ಯಜಿಸಿದ್ದಾರೆ.
72 ವರ್ಷದ ಮೂರ್ತಿ ಅವರು ತಮ್ಮ ಕುಟುಂಬ ಸಮೇತ ಪುರಿಗೆ ದೇವರ ದರ್ಶನಕ್ಕೆ ಬಂದಿದ್ದರು. ಜಗನ್ನಾಥನ ದರ್ಶನ ಮುಗಿಸಿ ಬಿಮಲಾ ದೇವಸ್ಥಾನದ ಮುಂಭಾಗದ ಮೆಟ್ಟಿಲುಗಳ ಮೇಲೆ ಕುಳಿತಿದ್ದ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ ಈ ವೇಳೆ ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ದೇವಸ್ಥಾನಕ್ಕೆ ಬಂದಿದ್ದೆವು. ಅವರ ಆರೋಗ್ಯ ಸ್ಥಿತಿ ಉತ್ತಮವಾಗಿರುವುದರಿಂದ ನಮಗೆ ಹೆಚ್ಚು ಏನೂ ತಿಳಿದಿಲ್ಲ. ಆದರೆ, ಅವರು ದೇವಾಲಯದ ಸಂಕೀರ್ಣದೊಳಗೆ ಕುಸಿದು ಬಿದ್ದಿದ್ದಾರೆ ಎಂದು ಮೃತರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.