ಬೆಂಗಳೂರು: ದೇವರನಾಡು ಕೇರಳದಲ್ಲಿ ಭಾರಿ ಮಳೆಯಿಂದಾಗಿ 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 6 ಜನರು ನಾಪತ್ತೆಯಾಗಿದ್ದಾರೆ. ಈ ನಡುವೆ ಅಕ್ಟೋಬರ್ 25ರವರೆಗೂ ಕೇರಳದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿಸಲಾಗಿದೆ. ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರಧಾನಿಗಾಗಿ ‘ಏ ಮೇರೆ ವತನ್’ ಹಾಡಿದ ವಿಶೇಷ ಸಾಮರ್ಥ್ಯವುಳ್ಳ ಕೋವಿಡ್ ಲಸಿಕೆ ಫಲಾನುಭವಿ
ಕೇರಳದಲ್ಲಿ ಭಾರಿ ಮಳೆ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಈ ಕುರಿತು ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮಳೆ ಅವಾಂತರದಿಂದ ಉಂಟಾಗುವ ಯಾವುದೇ ಸವಾಲು ಎದುರಿಸಲು ಸನ್ನದ್ದರಾಗಿರುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.