ರಾಯಲ್ ಎನ್ಫೀಲ್ಡ್ ಬೈಕ್ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ.
ದೇವಸ್ಥಾನದ ಹೊರಗೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹೊತ್ತಿಕೊಂಡಿದೆ. ಬೈಕ್ ಸವಾರ ರವಿಚಂದ್ರ ಮೈಸೂರಿನಿಂದ 387 ಕಿ.ಮೀ ಪ್ರಯಾಣಿಸಿ ನೆಟ್ಟಿಕಂಟಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಬೈಕ್ಗೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ವಿಡಿಯೋದಲ್ಲಿ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ನ ಪೆಟ್ರೋಲ್ ಟ್ಯಾಂಕ್ ಸ್ಪೋಟಗೊಂಡಿರುವುದನ್ನು ಕಾಣಬಹುದಾಗಿದೆ. ಬೈಕ್ನಲ್ಲಿ ಬೆಂಕಿ ತೀವ್ರತೆ ಹೆಚ್ಚಾಗುತ್ತಿದ್ದಂತೆಯೇ ಸ್ಥಳೀಯರು ಜಮಾಯಿಸಿದ್ದಾರೆ. ರವಿಚಂದ್ರ ಈ ಬೈಕ್ನ್ನು 2017ರಲ್ಲಿ ಖರೀದಿಸಿದ್ದರು ಎನ್ನಲಾಗಿದೆ.
ಈ ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆದರೆ ದೇಶದಲ್ಲಿ ಈಗೀಗ ಮೋಟಾರ್ ಸೈಕಲ್ ಸ್ಫೋಟಗೊಳ್ಳುತ್ತಿರುವ ಪ್ರಕರಣಗಳು ಒಂದೊಂದೇ ಹೆಚ್ಚುತ್ತಿದೆ. ಇಲ್ಲಿಯವರೆಗೆ ಎಲೆಕ್ಟ್ರಿಕ್ ಬೈಕ್ಗಳು ಮಾತ್ರ ಈ ರೀತಿ ಸ್ಫೋಟಗೊಳ್ಳುತ್ತಿದ್ದವು.ಇದೀಗ ಪೆಟ್ರೋಲ್ ಬೈಕ್ ಕೂಡ ಸ್ಫೋಟಗೊಂಡಿರುವುದು ಆತಂಕವನ್ನು ಹೆಚ್ಚಿಸಿದೆ.
https://twitter.com/i/status/1510463748498022400