alex Certify ದೇವಾಲಯದ ಹುಂಡಿಯನ್ನೇ ಹೊತ್ತೊಯ್ದ ಕಳ್ಳರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಾಲಯದ ಹುಂಡಿಯನ್ನೇ ಹೊತ್ತೊಯ್ದ ಕಳ್ಳರು…!

ಮೂವರು ಕಳ್ಳರಿದ್ದ ಗುಂಪು ದೇವಾಲಯಕ್ಕೆ ನುಗ್ಗಿ ಹುಂಡಿ ಪೆಟ್ಟಿಗೆಯನ್ನು ಹೊತ್ತೊಯ್ದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮುತ್ತಲಕೋಡಿ ಬೀರೇಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಇವರುಗಳು ಹುಂಡಿ ಪೆಟ್ಟಿಗೆ ತೆಗೆದುಕೊಂಡು ಹೋಗಿದ್ದು, ಎಂದಿನಂತೆ ಬೆಳಗ್ಗೆ ಅರ್ಚಕರು ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಕಳ್ಳರ ಕರಾಮತ್ತು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಸದಲಗಾ ಠಾಣೆ ಪೊಲೀಸ್ ಅಧಿಕಾರಿಗಳು ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...